For the best experience, open
https://m.bcsuddi.com
on your mobile browser.
Advertisement

'ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವಕ್ಕೆ ಚಿಂತನೆ'- ದಿನೇಶ್‌ ಗುಂಡೂರಾವ್‌

01:59 PM Nov 04, 2023 IST | Bcsuddi
 ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವಕ್ಕೆ ಚಿಂತನೆ   ದಿನೇಶ್‌ ಗುಂಡೂರಾವ್‌
Advertisement

ಬೆಂಗಳೂರು: ಯಾವುದೇ ಪ್ರತಿಫಲವನ್ನು ಬಯಸದೇ ಇನ್ನೊಬ್ಬರ ಜೀವವನ್ನು ಉಳಿಸಲು ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವವನ್ನು ನೀಡುವ ಕುರಿತು ನೀತಿಯನ್ನು ರೂಪಿಸಲು ರಾಜ್ಯ ಸರ್ಕಾರವು ಚಿಂತನೆಯನ್ನು ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಅವರು, ಯಾವುದೇ ಪ್ರತಿಫಲವನ್ನು ಬಯಸದೇ ಇನ್ನೊಬ್ಬರ ಜೀವವನ್ನು ಉಳಿಸಲು ಅಂಗಾಂಗ ದಾನವನ್ನು ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವವನ್ನು ನೀಡುವ ಕುರಿತಂತೆ ನೀತಿಯನ್ನು ರೂಪಿಸಲು ರಾಜ್ಯ ಸರ್ಕಾರವು ಚಿಂತನೆಯನ್ನು ನಡೆಸುತ್ತಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ತಮಿಳುನಾಡು ಸರ್ಕಾರ ಮಾದರಿಯಲ್ಲಿ ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗೂ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಈ ಗೌರವದ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಇನ್ನೂ ಹೆಚ್ಚಿನ ಜನರಲ್ಲಿ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ.

Advertisement

ಈ ಅಂಗಾಂಗ ದಾನವನ್ನು ಮಾಡುವುದರಿಂದ ಇನ್ನೊಂದು ಜೀವಕ್ಕೆ ಬೆಳಕಾದಂತೆ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಂಗಾಂಗಗಳ ಬೇಡಿಕೆ ಹಾಗೂ ಪೂರೈಕೆಗಳ ನಡುವೆ ಬಹಳ ವ್ಯತ್ಯಾಸವಿದ್ದು ಅದನ್ನು ಸರಿದೂಗಿಸಲು ಸರ್ಕಾರವು ಪ್ರಯತ್ನವನ್ನು ಮಾಡುತ್ತಿದ್ದು ಈ ಗೌರವವು ಅಂಗಾಂಗ ದಾನಮಾಡಲು ಉತ್ತೇಜನೆ ನೀಡುತ್ತದೆ ಎಂದು ಹೇಳಿದರು.

ಈ ಅಂಗಾಂಗ ದಾನವನ್ನು ಮಾಡುವುದರಿಂದ ಇನ್ನೊಂದು ಜೀವಕ್ಕೆ ಬೆಳಕಾದಂತೆ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಂಗಾಂಗಗಳ ಬೇಡಿಕೆ ಹಾಗೂ ಪೂರೈಕೆಗಳ ನಡುವೆ ಬಹಳ ವ್ಯತ್ಯಾಸವಿದ್ದು ಅದನ್ನು ಸರಿದೂಗಿಸಲು ಸರ್ಕಾರವು ಪ್ರಯತ್ನವನ್ನು ಮಾಡುತ್ತಿದ್ದು ಈ ಗೌರವವು ಅಂಗಾಂಗ ದಾನಮಾಡಲು ಉತ್ತೇಜನೆ ನೀಡುತ್ತದೆ ಎಂದು ಹೇಳಿದರು.

Author Image

Advertisement