ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅದೃಷ್ಟದ ಕಲ್ಲು ತೋರಿಸಿ ಸ್ನೇಹಿತನಿಗೆ 52 ಲಕ್ಷದ ಉಂಡೆನಾಮ ಹಾಕಿದ ದುರುಳರು..!

09:15 AM Jan 08, 2024 IST | Bcsuddi
Advertisement

ಬೆಂಗಳೂರು : ಸ್ನೇಹವೇ ಹಾಗೇ ಜೀವಕ್ಕೆ ಜೀವ ಕೊಡುವ ಕಷ್ಟದಲ್ಲಿದ್ದಾಗ ಸಹಾಯದ ಹಸ್ತ ನೀಡುವ ಸ್ನೇಹಕ್ಕೆ ಬೆಲೆ ಕಟ್ಟಲಾದಿತೇ..? ಆದ್ರೆ ಸ್ನೇಹಿತನಿಗೆ ಲಕ್ಷಾಂತರ ರೂಪಾಯಿಗಳ ಪಂಗನಾಮ ಹಾಕಿ ವಿಶ್ವಾಸಘಾತ ಮಾಡಿದ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement

ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್‌ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್‌ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್‌ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್‌ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ ಆಲಿಯಿಂದ ₹52 ಲಕ್ಷವನ್ನು ವಸೂಲಿ ಮಾಡಿದ ಆರೋಪಿಗಳು, ಬಳಿಕ ಪಚ್ಚೆ ಕಲ್ಲು ಕೊಡಲು ಏನೇನೂ ಸಬೂಬು ಹೇಳುತ್ತಿದ್ದರು. ಕೊನೆಗೆ ಪಚ್ಚೆ ಕಲ್ಲು ತೆಗೆದುಕೊಂಡು ಆಲಿ ಮನೆಗೆ ಹೋಗಿದ್ದ ಆರೋಪಿಗಳು, ಈ ಕಲ್ಲನ್ನು ಖರೀದಿಸಲು ವೈಟ್‌ಫೀಲ್ಡ್‌ಗೆ ಸ್ವಾಮೀಜಿಯೊಬ್ಬರು ಬಂದಿದ್ದಾರೆ ಎಂದು ಹೇಳಿ ಆಲಿಯನ್ನು ಹೊರಗೆ ಕರೆ ತಂದಿದ್ದರು. ನಂತರ ‘ಚೀನಾದ ಉದ್ಯಮಿ ಖರೀದಿಸುತ್ತಾರೆ. ಸದ್ಯ ರಾಜಸ್ಥಾನಕ್ಕೆ ವಿದೇಶಿ ಉದ್ಯಮಿ ಬಂದಿದ್ದು, ಅಲ್ಲಿ ಹೋಗಿ ಭೇಟಿ ಮಾಡಿ’ ಎಂದು ಸ್ವಾಮೀಜಿ ಹೇಳಿ ಕಳುಹಿಸಿದ್ದರು. ಇದನ್ನು ನಂಬಿದ ಉದ್ಯಮಿ, ಆರೋಪಿಗಳ ಜೊತೆಯಲ್ಲಿ ರಾಜಸ್ಥಾನಕ್ಕೆ ಪಚ್ಚೆ ಕಲ್ಲು ತೆಗೆದುಕೊಂಡು ಹೋಗಿದ್ದರು. ಅಲ್ಲಿ ಒಂದು ತಿಂಗಳು ಹೋಟೆಲ್‌ನಲ್ಲಿ ಉಳಿದುಕೊಂಡು ಕೊನೆಗೊಂದು ದಿನ ಪಚ್ಚೆ ಕಲ್ಲು ಮಾರಾಟ ಮಾಡಿ ಹಣವನ್ನು ತೆಗೆದುಕೊಂಡು ಬರುವುದಾಗಿ ಉದ್ಯಮಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದರು. ಬಳಿಕ ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ತಾನು ಮೋಸ ಹೋಗಿರುವುದು ಅರಿವಾಗಿ ಆಲಿ ವಿಶ್ವಾಸ ದ್ರೋಹ ಮಾಡಿದ ಸ್ನೇಹಿತರ ವಿರುದ್ದ ಪೊಲೀಸ್ ಮೆಟ್ಟಲೇರಿದ್ದಾರೆ.

Advertisement
Next Article