ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದ ಮತ್ತೊಂದು ಹಗರಣಕ್ಕೆ ವೇದಿಕೆ ಆಗದಿರಲಿ'- ಆರ್‌ ಆಶೋಕ್‌

02:07 PM Sep 18, 2024 IST | BC Suddi
Advertisement

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ . ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎಂದು ವಿಧಾನಸಭೆ ವಿರೋ ಧ ಪಕ್ಷದ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.

Advertisement

ಈ ಕುರಿತು ಬುಧವಾರ ಎಕ್ಸ್ ನಲ್ಲಿ ಟ್ವೀಟ್‌ ಮಾಡಿರುವ ಅವರು, ಕಳೆದ ವರ್ಷ ಅಂತರರಾಷ್ಟ್ರೀ ಯ ಖ್ಯಾತಿಯ ಸರೋ ದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇ ಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷ ವಾದರೂ ನಾಡಹಬ್ಬ ದಸರಾ ಮಹೋ ತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ಆಚರಿಸಲಿ ಎಂದು ಹೇಳಿದರು.

ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷ ವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿಹೊತ್ತು ಕನ್ನಡಿಗರಮಾನ ಕಳಿಯುತ್ತೋ ಕಾದು
ನೋಡಬೇ ಕು. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋ ತ್ಸವ. ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನ ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು. ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ ಎಂದು ತಿಳಿಸಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article