For the best experience, open
https://m.bcsuddi.com
on your mobile browser.
Advertisement

ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳಿಗೆ ಸಿಎಂ ಗರಂ

02:27 PM Jul 09, 2024 IST | Bcsuddi
ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳಿಗೆ ಸಿಎಂ ಗರಂ
Advertisement

ಬೆಂಗಳೂರು: ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ. ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಸಾರಿಗೆ ಇಲಾಕೆಯ ಸಭೆಯಲ್ಲಿ ಮಾತನಾಡಿದ ಅವರು, ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗೀತಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ.ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು.

Advertisement

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ ಎಂದರು.ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದು ಹೇಳಿದರು.

Author Image

Advertisement