ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅನರ್ಹ BPL ಕಾರ್ಡ್‌ ಹೊಂದಿದವರೇ ಎಚ್ಚರ..! : ಸಿಎಂ ಕೊಟ್ಟ ಸೂಚನೆ ಹೀಗಿದೆ?

11:07 AM Jul 09, 2024 IST | Bcsuddi
Advertisement

ಬೆಂಗಳೂರು : ಯಾರೆಲ್ಲಾ ಅನರ್ಹ ಬಿ.ಪಿ.ಎಲ್. ಕಾರ್ಡ್‌ ಹೊಂದಿದ್ದಾರೆ, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ. ಆದರೆ, ಕೆಲವರು ಕಾರ್ಡ್‌ ಹೊಂದಲು ಅನರ್ಹರಾದರೂ ಅದನ್ನು ಇಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ನಡೆದ ಡಿಸಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮಹತ್ವದ ಸೂಚನೆಗಳನ್ನು ಸಿಎಂ ನೀಡಿದ್ದಾರೆ.

Advertisement

ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು ಎಂದು ವಿವರಿಸಿದರು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎಂದರು.

ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಡಿಸಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದ್ದಾರೆ. ಪಿಂಚಣಿ ಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿ 2225 ಗ್ರಾಮಗಳು ಮತ್ತು 2038334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಸಂತ್ರಸ್ಥ. ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.

Advertisement
Next Article