ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅನಾರೋಗ್ಯ ಕಾರಣ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ- ಎಚ್‌ಡಿಡಿ

04:16 PM Jun 09, 2024 IST | Bcsuddi
Advertisement

ಬೆಂಗಳೂರು:  ಆರೋಗ್ಯ ಹದಗೆಟ್ಟಿರುವ ಕಾರಣ ನಾನು ಇಂದು ಸಂಜೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ಇಂದು (ಭಾನುವಾರ) ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀ ಕರಿಸಲಿದ್ದಾರೆ.

ಸಮಾರಂಭದಲ್ಲಿ ಬಾಂ ಗ್ಲಾದೇ ಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರವೇ ಭಾರತಕ್ಕೆ ಬಂದಿಳಿದಿದ್ದಾರೆ. ಅವರಲ್ಲದೆ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮ ಸಿಂಘೆ,
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೆರಿಂಗ್ ಟೋ ಬಗೆ,ಮಾಲ್ದೀ ವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಮಾರಿಷಸ್ ಪ್ರಧಾನಿ
ಪ್ರವಿಂದ ಕುಮಾರ್ ಜಗನ್ನಾಥ್ ಸೇ ರಿ ಹಲವು ರಾಷ್ಟ್ರಗಳ ಗಣ್ಯರು ಮೋದಿ ಅವರ ಪ್ರಮಾಣವಚನ ಸ್ವೀ ಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಸೇ ರಿದಂ ತೆ ಸಾವಿರಾರು ಸಂ ಖ್ಯೆಯಲ್ಲಿ ಅತಿಥಿಗಳು ಭಾಗವಹಿಸಲಿದ್ದಾರೆ. ಎನ್‌ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30
ಮಂದಿ ಸೇ ರ್ಪ ಡೆಯಾಗಲಿದ್ದಾರೆ. ಮೊದಲ ಹಂತದಲ್ಲಿ ಮಿತ್ರ ಪಕ್ಷಗಳ 12ರಿಂ ದ 15 ಸದಸ್ಯರು ಸಂಪುಟಕ್ಕೆ ಸೇರುವ ಸಂಭವ ಇದೆ.

 

Advertisement
Next Article