For the best experience, open
https://m.bcsuddi.com
on your mobile browser.
Advertisement

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ

12:22 PM Aug 31, 2024 IST | BC Suddi
ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ
Advertisement

ಬೆಂಗಳೂರು :ಅನ್ನಭಾಗ್ಯ ಯೋಜನೆಗೆ ಮತ್ತೆ ಸಂಕಷ್ಟ ಎದುರಾಗಿದೆ. ಇದೀಗ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಒಂದೂವರೆ ಕೋಟಿ ಬಿಪಿಎಲ್ ಫಲಾನುಭವಿಗಳ ಪೈಕಿ 13 ಲಕ್ಷದ 45 ಸಾವಿರ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಿದೆ.

ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ 2.36 ಲಕ್ಷ ಟನ್ ಅಕ್ಕಿ ನೀಡಿದರೂ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಈ ತಿಂಗಳು ಡಿಬಿಟಿ ಹಣದ ಬದಲು ಅಕ್ಕಿಯನ್ನೆ ಕೊಡಲು ನಿರ್ಧರಿಸಿದ್ದ ಆಹಾರ ನಾಗರೀಕ ಸರಬರಾಜು ಇಲಾಖೆಗೆ ಮತ್ತೊಂದು ತೊಂದರೆ ಎದುರಾಗಿದೆ.

ಕೇಂದ್ರ ಸರ್ಕಾರ 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನ ಮುಂದಿನ ಮಾರ್ಚ್ ವರೆಗೂ ಕೊಡಲು ನಿರ್ಧರಿಸಿದೆ. ಆದ್ರೆ ಇಷ್ಟು ಅಕ್ಕಿ ಕೊಟ್ರು 13 ಲಕ್ಷದ 45 ಸಾವಿರ ಜನರಿಗೆ ಅಕ್ಕಿಯ ಕೊರತೆ ಎದುರಾಗಿದ್ದು, ಮತ್ತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನ ಭೇಟಿಯಾಗಲು ಆಹಾರ ನಾಗಾರೀಕ ಸರಬರಾಜು ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ.

Advertisement

ಮುಂದಿನ ತಿಂಗಳಿನಿಂದ ಹಣದ ಬದಲು ಅಕ್ಕಿ ಸಿಗತ್ತೆ ಎಂದು ಖುಷಿಯಾಗಿದ್ದ ಫಲಾನುಭವಿಗಳಿಗೆ ಮತ್ತೆ ನಿರಾಸೆಯಾಗಿದ್ದು, ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಅಕ್ಕಿ ಕೊಡುತ್ತಾ ಎಂಬುವುದನ್ನು ಕಾದುನೋಡಬೇಕಿದೆ.

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement