ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು, ಸಂತ್ರಸ್ತರು ಭಯದಿಂದ ಬದುಕುವುದಾಗಿದೆ'- ದ್ರೌಪದಿ ಮುರ್ಮು

10:14 AM Sep 02, 2024 IST | BC Suddi
Advertisement

ನವದೆಹಲಿ : ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ದುಃಖದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದರ ಕುರಿತು ಕೂಲಂಕಷವಾಗಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮುಂದುವರಿದು ಇತ್ತೀಚಿನ ದಿನಗಳಲ್ಲಿ ಸಮಯೋಚಿತ ಆಡಳಿತ, ಮೂಲಸೌಕರ್ಯ, ಸೌಲಭ್ಯಗಳು, ತರಬೇತಿ ಮತ್ತು ಮಾನವ ಸಂಪನ್ಮೂಲಗಳ ಸುಧಾರಣೆ ಕಂಡುಬಂದಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಾಗಿದೆ. ಅಲ್ಲದೇ ಇತ್ತೀಚಿನ ವರ್ಷಗಳಲ್ಲಿ ಆಯ್ಕೆ ಸಮಿತಿಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿರುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article