For the best experience, open
https://m.bcsuddi.com
on your mobile browser.
Advertisement

ಅಪರಿಚಿತರ ಗುಂಡಿನ ದಾಳಿಗೆ ಓರ್ವ ಬಾಲಕಿ ಸಾವು; 10 ಮಕ್ಕಳು ಗಂಭೀರ

12:26 PM Apr 15, 2024 IST | Bcsuddi
ಅಪರಿಚಿತರ ಗುಂಡಿನ ದಾಳಿಗೆ ಓರ್ವ ಬಾಲಕಿ ಸಾವು  10 ಮಕ್ಕಳು ಗಂಭೀರ
Advertisement

ಚಿಕಾಗೋ: ಅಪರಿಚಿತ ದುಷ್ಕರ್ಮಿಗಳು 11 ಮಕ್ಕಳ ಮೇಲೆ ಗುಂಡು ಹಾರಿಸಿದ್ದು, ಈ ಪೈಕಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿ ಉಳಿದ 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಅಮೆರಿಕಾದ ಚಿಕಾಗೋದಲ್ಲಿ ಭಾನುವಾರ ನಡೆದಿದೆ.

ದುಷ್ಕರ್ಮಿಗಳು ಫ್ಯಾಮಿಲಿ ಟುಗೆದರ್ ಕಾರ್ಯಕ್ರಮಕ್ಕೆ ನುಗ್ಗಿ ಮಕ್ಕಳ ಮೇಲೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ 8 ವರ್ಷದ ಬಾಲಕಿ ತಲೆಗೆ ಗುಂಡು ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಉಳಿದ 10 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ದುಷ್ಕರ್ಮಿಗಳು ನಾಲ್ವರು ಮಕ್ಕಳು, ಒಂದು ವರ್ಷದ ಬಾಲಕ ಹಾಗೂ 8 ವರ್ಷದ ಬಾಲಕನಿಗೆ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಪರಿಣಾಮ ಈ ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದಾರೆ. ಜೊತೆಗೆ 9 ವರ್ಷದ ಬಾಲಕನೋರ್ವನಿಗೆ ಹಾಗೂ 36 ವರ್ಷದ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡು ತಗುಲಿದ 36 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisement

Author Image

Advertisement