ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

06:59 PM Jun 29, 2024 IST | Bcsuddi
Advertisement

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

ತನಿಖೆ ಮತ್ತು ನ್ಯಾಯದ ಹಿತಾಸಕ್ತಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯ ಅಗತ್ಯವಿದೆ ಎಂದು ಸಿಬಿಐ ಕೋರ್ಟ್ ಗೆ ತಿಳಿಸಿತ್ತು. ಇಡಿ ತನಿಖೆ ನಡೆಸುತ್ತಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಜೈಲು ಸೇರಿದ್ದರು. ಬಳಿಕ ತಿಹಾರ್ ಜೈಲಿನಿಂದಲೇ ಸಿಬಿಐ ಅವರನ್ನು ವಶಕ್ಕೆ ಪಡೆದು ಕೋರ್ಟ್ ಮುಂದೆ ಹಾಜರುಪಡಿಸಿತ್ತು.

ಇದೀಗ ಇಂದಿಗೆ ಅರವಿಂದ್ ಕೇಜ್ರಿವಾಲ್ ಅವರ 3 ದಿನಗಳ ಸಿಬಿಐ ಕಸ್ಟಡಿ ಮುಕ್ತಾಯವಾಗಿದೆ. ಈ ಹಿನ್ನೆಲೆ ಇಂದು ಮುಂಜಾನೆ, ವಿಶೇಷ ನ್ಯಾಯಾಧೀಶರಾದ ಸುನೈನಾ ಶರ್ಮಾ ಅವರು 3 ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ಬಳಿಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಆದೇಶವನ್ನು ಕಾಯ್ದಿರಿಸಿದ್ದರು. ಇದೀಗ ಇಂದು ತೀರ್ಪು ಪ್ರಕಟಿಸಿದ್ದು, ಇನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.

Advertisement
Next Article