ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಬಕಾರಿ ನೀತಿ ಪ್ರಕರಣ: ಜುಲೈ 3ರವರೆಗೆ ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

01:43 PM Jun 03, 2024 IST | Bcsuddi
Advertisement

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಅಬಕಾರಿ ನೀತಿ ಪ್ರಕರಣದ ಇತರ ಮೂರು ಆರೋಪಿಗಳಾದ ರಾಜಕುಮಾರ್, ಅರವಿಂದ್ ಮತ್ತು ದಾಮೋದರ್ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದೆ. ಇಂದು ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನಂತರ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ವಿಸ್ತರಿಸಿ ತೀರ್ಪು ನೀಡಿದ್ದಾರೆ.

ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮೇ 15ರಂದು ಕವಿತಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ ಮತ್ತು ಇಡಿ, ಕವಿತಾ ಅವರು ಹೆಚ್ಚು ಪ್ರಭಾವಿಯಾಗಿದ್ದು, ಶಕ್ತಿಯುತರಾಗಿದ್ದಾರೆ. ಕವಿತಾ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಾದಿಸಿತ್ತು.

 

Advertisement
Next Article