ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

08:21 AM Jul 13, 2024 IST | Bcsuddi
Advertisement

 

Advertisement

     ದಾವಣಗೆರೆ:   ಪ್ರಸಕ್ತ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ದಾವಣಗೆರೆ ಜಿಲ್ಲೆಗೆ ಕುರಿ, ಮೇಕೆ ಘಟಕ ಪೂರೈಕೆ ಯೋಜನೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದಿಂದ  18 ರಿಂದ 60  ವಯೋಮಿತಿಯ ಸದಸ್ಯರುಗಳನ್ನು ಫಲಾನುಭವಿಗಳನ್ನಾಗಿ ಸರ್ಕಾರದಿಂದ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾದೆ.

ಯೋಜನೆಗೆ ಸಂಬಂಧಿಸಿದ ನಿಗದಿತ ಅರ್ಜಿಗಳನ್ನು ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆಯಾ ತಾಲೂಕಿನ ಅದ್ಯಕ್ಷರು, ಕಾರ್ಯದರ್ಶಿಗಳಿಂದ ಪಡೆದು  ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ಯೋಜನೆಗೆ ಸಂಬಂಧಿಸಿದ ಅರ್ಜಿಗಳನ್ನು ಆಯಾ ತಾಲೂಕು, ಹೋಬಳಿ ಮಟ್ಟದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆಯಾ ತಾಲೂಕಿನ ಅದ್ಯಕ್ಷರು, ಕಾರ್ಯದರ್ಶಿ ಇವರಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು  ಜು.20 ಕೊನೆಯ ದಿನವಾಗಿರುತ್ತದೆ ಎಂದು  ಕರ್ನಾಟಕ ಕುರಿ ಮತ್ತು ಉಣ್ಣೆ ಆಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Tags :
ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Advertisement
Next Article