ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ ..!

01:13 PM Apr 06, 2024 IST | Bcsuddi
Advertisement

ವಾಷಿಂಗ್ಟನ್: ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ತಿಳಿಸಿದೆ. "ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಶ್ರೀ ಉಮಾ ಸತ್ಯ ಸಾಯಿ ಗಡ್ಡೆ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ. ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಮೃತ ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ವಾಪಸ್ ಕಳುಹಿಸಲು ಭಾರತೀಯ ಕಾನ್ಸುಲೇಟ್ ನೆರವು ನೀಡಿದೆ. ಇದು ಈ ವರ್ಷ ಹತ್ತನೇ ಪ್ರಕರಣವಾಗಿದೆ. ಅಮೆರಿಕದಲ್ಲಿ ಇತ್ತೀಚೆಗೆ ಭಾರತೀಯ ವಿದ್ಯಾರ್ಥಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದು ಭಾರತೀಯ ಸಮುದಾಯದಲ್ಲಿ ಆತಂಕ ಹೆಚ್ಚಿಸಿದೆ‌.

Advertisement

Advertisement
Next Article