For the best experience, open
https://m.bcsuddi.com
on your mobile browser.
Advertisement

ಅಯೋಧ್ಯೆಯಲ್ಲಿ ನಿರ್ಮಾಣವಾಹಲಿದೆ ಕರ್ನಾಟಕ ಯಾತ್ರಿ ನಿವಾಸ

10:47 AM Jan 10, 2024 IST | Bcsuddi
ಅಯೋಧ್ಯೆಯಲ್ಲಿ ನಿರ್ಮಾಣವಾಹಲಿದೆ ಕರ್ನಾಟಕ ಯಾತ್ರಿ ನಿವಾಸ
Advertisement

ಬೆಂಗಳೂರು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರ ಹಾಗೂ ನಗರದ ವಿವಿಧ ದೇವಸ್ಥಾನ ಹಾಗೂ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಕರ್ನಾಟಕದ ಪ್ರವಾಸಿಗರ ಅನುಕೂಲಕ್ಕಾಗಿ, ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ಸ್ಥಾಪನೆಗೆ ಮುಂದಾಗಲಿದೆ.

ಇದಕ್ಕಾಗಿ 2021ರಲ್ಲೇ ಉತ್ತರ ಪ್ರದೇಶದ ಸಿಎಂಗೆ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದ್ದರು. ಜೊತೆಗೆ ಅಯೋದ್ಯೆಯಲ್ಲಿ ಯಾತ್ರಿ ನಿವಾಸ ಸ್ಥಾಪನೆಗೆ ಅಂದಿನ ಬಿಎಸ್‌ವೈ ಸರ್ಕಾರ 10 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದರು. ಇದಾದ ಬಳಿಕ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾಪತ್ರವನ್ನ ಬರೆದು ಮನವಿ ಮಾಡಿದ್ದರು.

ಈಗ ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯ್ಯೋಧ್ಯೆಗೆ ಬರುವ ಹಿನ್ನಲೆ ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಸರಯೂ ನದಿ ಸಮೀಪದಲ್ಲಿಅತಿಥಿ ಗೃಹ ನಿರ್ಮಾಣವಾಗಲಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ ಅಂತ ತಿಳಿಸಿದೆ.

Advertisement

Author Image

Advertisement