ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಆರೋಪಿಗಳ ಬಂಧನ

11:25 AM Jan 04, 2024 IST | Bcsuddi
Advertisement

ಲಖನೌ: ಅಯೋಧ್ಯೆಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಎಸ್ ಟಿಎಫ್ ಬುಧವಾರ ಬಂಧಿಸಿದೆ.

Advertisement

ಆರೋಪಿಗಳಾದ ಗೊಂಡಾದ ಕತ್ರಾ ನಿವಾಸಿಯಾಗಿರುವ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರನ್ನು ಬಂಧಿಸಲಾಗಿದೆ. ಇವರು ರಾಮ ಮಂದಿರ ಸ್ಫೋಟಿಸುವುದಾಗಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗುರಿಯಾಗಿಸಿ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಆರೋಪಿಗಳಾದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರಿಂದ ಎರಡು ಮೊಬೈಲ್, ಮೇಲ್ ಐಡಿ, ಎರಡು ವೈ-ಫೈ ರೂಟರ್ ಹಾಗೂ ಸಿಸಿಟಿವಿ ಡಿವಿಆರ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಎಸ್ ಟಿಎಫ್ ಗೋಮತಿನಗರದ ವಿಭೂತಿಖಂಡ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪ್ಯಾರಾಮೆಡಿಕಲ್ ಇನ್ಸ್‌ಟಿಟ್ಯೂಟ್‌ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಮೇಲ್ ಒಂದು ಬಂದಿದ್ದು, ಅವರಲ್ಲಿ ಅಯೋಧ್ಯೆಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ತಿಳಿದುಬಂದಿದೆ.

Advertisement
Next Article