ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು.!

05:22 PM Oct 21, 2024 IST | BC Suddi
Advertisement

 

Advertisement

ಬೆಂಗಳೂರು : ಪತ್ನಿಯ ಹೆಸರಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಚಿವ ಎನ್ಎಸ್ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ.!

ರಾಯಚೂರಿನಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ 5 ಎಕರೆ 27 ಗುಂಟೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕುರಿತಂತೆ ರಾಯಚೂರು ಉಪವಲಯ ಅರಣ್ಯಾಧಿಕಾರಿ ತನಿಖೆ ನಡೆಸುತ್ತಿದ್ದು, ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. ಈ ಭಾಗದಲ್ಲಿ ಪ್ರತಿ ಚದರ ಅಡಿಗೆ ಕನಿಷ್ಟ 4 ಸಾವಿರ ರೂ. ದರ ಇದೆ. ಒಟ್ಟು ಭೂಮಿಗೆ ನೂರಾರು ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವಿದೆ.

ಎನ್ಎಸ್ ಬೋಸರಾಜು ಪತ್ನಿ ಕೃಷ್ಣವೇಣಿ ಅವರು 17 ಗುಂಟೆ ಜಮೀನನ್ನು ಕಬಳಿಸಿದ್ದಾರೆ ಎಂದು ದೂರಿದ್ದಾರೆ. ಭೂಮಿ ಒತ್ತುವರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸೃಜನಪಕ್ಷಪಾತ ಎಸಗಲಾಗಿದೆ. ಗುಂಪು ರಚನೆ ಮಾಡಿಕೊಂಡು ರಕ್ಷಿತಾರಣ್ಯವನ್ನು ಕಬಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೆಖಿಸಿದ್ದಾರೆ.

Tags :
ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು.!
Advertisement
Next Article