For the best experience, open
https://m.bcsuddi.com
on your mobile browser.
Advertisement

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳ ಪರಿಣಾಮ ರಾಜ್ಯಾದ್ಯಂತ ಇಂದು ಭಾರೀ ಮಳೆ.!

07:18 AM Jun 10, 2024 IST | Bcsuddi
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳ ಪರಿಣಾಮ ರಾಜ್ಯಾದ್ಯಂತ ಇಂದು ಭಾರೀ ಮಳೆ
Advertisement

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳ ಪರಿಣಾಮ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ ಮತ್ತು ಉತ್ತರಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ನೀಡಿದೆ.

ಇಂದು ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Tags :
Author Image

Advertisement