For the best experience, open
https://m.bcsuddi.com
on your mobile browser.
Advertisement

ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ

11:57 AM Sep 13, 2024 IST | BC Suddi
ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ
Advertisement

ನವದೆಹಲಿ : ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಅವರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement