For the best experience, open
https://m.bcsuddi.com
on your mobile browser.
Advertisement

ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

06:21 PM Aug 05, 2024 IST | BC Suddi
ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
Advertisement

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟಿಗೆ ಸಲ್ಲಿಸಿದ್ದ ಜಾಮೀನು ಅರ್ಜಿನ್ನು ಹೈಕೋರ್ಟ್ ವಜಾ ಮಾಡಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿ ಕಸ್ಟಡಿಗೆ ನೀಡಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸಿಬಿಐ ನಡೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟಿನ ಈ ನಿರ್ಧಾರದಿಂದಾಗಿ ಕೇಜ್ರಿವಾಲ್ ಅವರಿಗೆ ಭಾರೀ ಹಿನ್ನಡೆ ಉಂಟು ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು 'ಸಮರ್ಥನೀಯ ಕಾರಣಗಳಿಲ್ಲದೆ' ಬಂಧನವಾಗಿಲ್ಲ . ಸಿಬಿಐನ ಕ್ರಮವನ್ನು ಕಾನೂನುಬಾಹಿರ ಎಂದು ಕರೆಯಲಾಗುವುದಿಲ್ಲ. ಇದರ ಜತೆಗೆ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದೆ. ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಅವರಿಗೆ ಸ್ವಾತಂತ್ರ‍್ಯವನ್ನು ನೀಡಿದೆ.

Advertisement

Author Image

Advertisement