ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅರಿವು ಶೈಕ್ಷಣಿಕ ಸಾಲ ಯೋಜನೆ: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

07:24 AM Jun 26, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್‍ನಲ್ಲಿ ಪರೀಕ್ಷೆಗೆ ಆಯ್ಕೆಯಾದ ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 21 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 07 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮೂಲಕ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯ ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನಿಗಮದ ಜಾಲತಾಣ kmdconline.karnataka.gov.in  ಗೆ ಬೇಟಿ ನೀಡಿ ಅರ್ಜಿಯನ್ನು ಮಾಡಿ,  ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಕಚೇರಿಗೆ ತಲುಪಿಸಬೇಕು.

ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ, ರೇಷನ್ ಕಾರ್ಡ್, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ ಸಿಇಟಿ, ನೀಟ್ ಸೇರಿದಂತೆ ಇತರೆ ಎಲ್ಲಾ ದಾಖಲೆಗಳನ್ನು ಕೌನ್ಸೆಲಿಂಗ್ ನಡೆಯುವವರೆಗೆ ಕಚೇರಿಗೆ ಸಲ್ಲಿಸಿದಲ್ಲಿ, ಸಾಲ ಬಿಡುಗಡೆ ಮಾಡುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-226412, ವಿಷಯ ನಿರ್ವಾಹಕರ ದೂರವಾಣಿ ಸಂಖ್ಯೆ  8431669372, 8277944213 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Tags :
ಅರಿವು ಶೈಕ್ಷಣಿಕ ಸಾಲ ಯೋಜನೆ: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Advertisement
Next Article