For the best experience, open
https://m.bcsuddi.com
on your mobile browser.
Advertisement

ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು.!  ಜೆಡಿಎಸ್ ನಿಂದ ಪ್ರತಿಭಟನೆ

04:27 PM May 08, 2024 IST | Bcsuddi
ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು    ಜೆಡಿಎಸ್ ನಿಂದ ಪ್ರತಿಭಟನೆ
Advertisement

ಚಿತ್ರದುರ್ಗ : ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಜಿಲ್ಲಾ ಜಾತ್ಯಾತೀತ ಜನತಾದಳದಿಂದ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜೆಡಿಎಸ್. ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ ಪೆನ್ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನಿಗೆ ಶಿಕ್ಷೆ ನೀಡಲು ಕಾನೂನಿದೆ. ಅದನ್ನು ಬಿಟ್ಟು ಸಂತ್ರಸ್ಥ ಮಹಿಳೆಯರ ಮಾನ ಹರಾಜು ಹಾಕುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ನನ್ನು ಸಚಿವ ಸಂಪುಟದಿಂದ ಕೈಬಿಟ್ಟು ತಕ್ಕ ಶಿಕ್ಷೆ ವಿಧಿಸಬೇಕು. ನಾಲ್ಕು ಗೋಡೆಗಳ ನಡುವೆ ನಡೆದಿರುವ ಕೃತ್ಯವನ್ನು ಇಡಿ ದೇಶವೇ ನೋಡುವಂತೆ ಮಾಡಿರುವುದು ಅತ್ಯಂತ ನೀಚ ಕೃತ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಜೆಡಿಎಸ್. ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ ಕೋರ್ ಕಮಿಟಿ ಈಗಾಗಲೆ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಉಚ್ಚಾಟಿಸಿದೆ. ಹೆಣ್ಣು ಮಕ್ಕಳ ಮಾನ ಸಂರಕ್ಷಣೆ ಮಾಡಬೇಕಾಗಿರುವ ಕಾಂಗ್ರೆಸ್ ಸರ್ಕಾರವೇ ಬೀದಿ ಪಾಲು ಮಾಡಿದೆ. ಈ ನೆಲದ ಕಾನೂನನ್ನು ಜೆಡಿಎಸ್. ಗೌರವಿಸುತ್ತದೆ. ಕಾಂಗ್ರೆಸ್ ಕೃಪಾ ಪೋಷಿತ ನಾಟಕ ಮಂಡಳಿ ಸಿಡಿ ಬಿಡುಗಡೆಗೊಳಿಸಿರುವ ಕಳಂಕ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳಿಗೆ ಮೆತ್ತಿಕೊಂಡಿದೆ. ರಾಜಕೀಯ ಲಾಭಕ್ಕಾಗಿ ಮತ್ತೊಬ್ಬರ ಮಾನ ಹರಣವಾಗಬಾರದು. ಮತ ಪಡೆಯುವ ಭ್ರಮೆಯಲ್ಲಿ ಕಾಂಗ್ರೆಸ್ ತೇಲುತ್ತಿರುವುದು ಮೂರ್ಖತನ ಎಂದು ಲೇವಡಿ ಮಾಡಿದರು.

Advertisement

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಎಸ್.ಐ.ಟಿ. ಪಾರದರ್ಶವಾಗಿ ತನಿಖೆ ನಡೆಸುತ್ತಿಲ್ಲದಿರುವುದರಿಂದ ಸಿ.ಬಿ.ಐ.ಗೆ ವಹಿಸಬೇಕು. ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಿರುವುದು ನಮ್ಮ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಜೆಡಿಎಸ್.ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ರಾಜ್ಯ ಕಾರ್ಯದರ್ಶಿ ಮಠದಟ್ಟಿ ವೀರಣ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಗುರುಸಿದ್ದಪ್ಪ, ರವೀಂದ್ರಪ್ಪ, ಶಂಕರ್ಮೂರ್ತಿ, ಮಂಜುನಾಥ್, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯರುಗಳಾದ ವಿಜಯಕುಮಾರ್, ತಿಪ್ಪೇಸ್ವಾಮಿ, ಅಲ್ಪಸಂಖ್ಯಾತ ಘಟಕದ ಅಬ್ಬು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags :
Author Image

Advertisement