ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ

10:29 AM Oct 22, 2024 IST | BC Suddi
Advertisement

ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಹೇಳಲಾಗಿದೆ.

ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಅ.24ರಂದು ರಾತ್ರಿ ಅಥವಾ ಅ.25ರಂದು ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್ ಇರುವ ಸಾಧ್ಯತೆ ಇದೆ. ಹೀಗಾಗಿ ಇಂದು ಸಂಜೆಯೊಳಗೆ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ದಡ ಸೇರುವಂತೆ ಸೂಚನೆ ನೀಡಲಾಗಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅ.24 ಹಾಗೂ 25ರಂದು ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ಪರಿಗಣಿಸಲಾಗಿದೆ.

 

Advertisement
Next Article