ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅ.25 ರಂದು ನೇರ ನೇಮಕಾತಿ ಸಂದರ್ಶನ

05:33 PM Oct 22, 2024 IST | BC Suddi
Advertisement

 

Advertisement

ಚಿತ್ರದುರ್ಗ:  ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಅ.25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪೆÇ್ಲಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೆÇೀಟೊಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Tags :
ಅ.25 ರಂದು ನೇರ ನೇಮಕಾತಿ ಸಂದರ್ಶನ
Advertisement
Next Article