ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆಗಸ್ಟ್ ನಲ್ಲಿ ಪ್ರಧಾನಿ ಮೋದಿ ಉಕ್ರೇನ್‌ ಭೇಟಿ ಸಾಧ್ಯತೆ..!

01:31 PM Jul 27, 2024 IST | Bcsuddi
Advertisement

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಂದರೆ ಆಗಸ್ಟ್‌ನಲ್ಲಿ ಉಕ್ರೇನ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ.  2022 ರಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಇದು ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ. ಇದಕ್ಕೂ ಮೊದಲು ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದರು.

Advertisement

2024 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಝೆಲೆನ್ಸ್ಕಿ ಮೋದಿಯವರನ್ನು ಅಭಿನಂದಿಸಿದ್ದರು. ಆಗಸ್ಟ್ 23 ರಂದು ಮೋದಿ ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಪ್ರವಾಸವು ಮಾತುಕತೆಯ ಹಂತದಲ್ಲಿದೆ. ಇದು ಇನ್ನೂ ಅಧಿಕೃತವಾಗಿ ಅಂತಿಮಗೊಳ್ಳಬೇಕಿದೆ.

ಸೆಪ್ಟೆಂಬರ್ 2022 ರಲ್ಲಿ ಉಜ್ಬೆಕಿಸ್ತಾನದ ಸಮರ್ಕಂಡ್ ನಗರದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ, ಪ್ರಧಾನಿ ಮೋದಿ ಅವರು ಯುದ್ಧವನ್ನು ಕೊನೆಗೊಳಿಸುವಂತೆ ಸೂಚಿಸಿದ್ದರು. ರಷ್ಯಾದ ನಾಯಕ ಉಕ್ರೇನ್ ಸಂಘರ್ಷವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಾನೆ ಎಂದಿದ್ದರು. ಮೋದಿಯವರ ಈ ನಿರ್ಧಾರಕ್ಕೆ ವಿಶ್ವ ನಾಯಕರಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು.

 

Advertisement
Next Article