ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಆರೋಗ್ಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು 2 ವರ್ಷದಲ್ಲಿ ಭರ್ತಿ ಮಾಡ್ತೇವೆ'- ದಿನೇಶ್ ಗುಂಡೂರಾವ್

04:53 PM Jul 24, 2024 IST | Bcsuddi
Advertisement

ಬೆಂಗಳೂರು: ಇನ್ಸ್​ಪೆಕ್ಷನ್ ಆಫೀಸರ್, ಪಿಹೆಚ್‌ಸಿಗಳಲ್ಲಿ ಸಿಬ್ಬಂದಿ ಸೇರಿದಂತೆ ಇನ್ನೂ ಹಲವು ಹುದ್ದೆಗಳು ಆರೋಗ್ಯ ಇಲಾಖೆಯಲ್ಲಿ ಖಾಲಿ ಇದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸುತ್ತೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

Advertisement

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಗಮನಕ್ಕೆ ತಂದು 2 ವರ್ಷಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದೇವೆ ಎಂದರು.

ಇನ್ನು ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆ ಅಧಿಕಾರಿ ಯಾರು, ಏನು ಅಂತಾ ನಮಗೆ ಗೊತ್ತಿಲ್ಲ. ಅಧಿಕಾರಿ ಕಲ್ಲೇಶ್‌ರನ್ನು ಇಡಿ ಅಧಿಕಾರಿಗಳೇ ಕರೆಸಿಕೊಂಡಿದ್ದಾರೆ. ಆ ಅಧಿಕಾರಿ ಭ್ರಷ್ಟಾಚಾರ ಮಾಡಿದ್ದಾರೋ ಇಲ್ವೋ ಬೇರೆ ವಿಚಾರ. ಮೊನ್ನೆ ದೂರು ಕೊಡುವ ಮೊದಲೇ ಇಡಿ ಏನು ಅಂತ ಹೇಳಿದ್ದೀವಿ. ಇಡಿಯವರು ಹಲವರಿಗೆ ಒತ್ತಡ ಹಾಕಿದ್ದಾರೆ, ನಮ್ಮ ಬಳಿ ಮಾಹಿತಿ ಇದೆ ಎಂದು ಹೇಳಿದರು.

ಸಿಎಂ, ಮಂತ್ರಿಗಳ ಹೆಸರು ಹೇಳುವಂತೆ ಒತ್ತಡಹಾಕಿ ಸಿಲುಕಿಸಲು ಯತ್ನ ನಡೆದಿದೆ. ಬೇರೆಯವರ ಮೇಲೂ ಒತ್ತಡ ಹಾಕಲಾಗಿದೆ, ಯಾರೂ ದೂರು ನೀಡಿಲ್ಲ. ವಿಪಕ್ಷಗಳು ಏನಾದರೂ ಹೇಳಿಕೊಳ್ಳಲಿ, ಇಡಿ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಡಿ ಅಧಿಕಾರಿಗಳು ಬಿಜೆಪಿ ಪರ ಇದ್ದಾರೆ. ಸಿಬಿಐ, ಎಸ್‌ಐಟಿ ಇರುವಾಗ ಇಡಿ ಬರುವ ಅವಶ್ಯಕತೆ ಏನಿತ್ತು? ನಾಗೇಂದ್ರ ಹೆಸರು ಸಿಬಿಐ ಹಾಗೂ ಎಸ್‌ಐಟಿನಲ್ಲಿ ಎಲ್ಲೂ ಇರಲಿಲ್ಲ. ಇಡಿ ಅಧಿಕಾರಿಗಳು ನೇರವಾಗಿ ಬಂದು ನಾಗೇಂದ್ರರನ್ನು ಬಂಧಿಸಿದ್ರು. ಇಡಿ ಅಧಿಕಾರಿಗಳು ದೇಶಾದ್ಯಂತ ಅನಾಹುತ ಸೃಷ್ಟಿಸುತ್ತಿದ್ದಾರೆ ಎಂದು ತಿಳಿಸಿದರು.

 

Advertisement
Next Article