ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆರ್.ಅಶೋಕ್​​ ವಿರುದ್ಧ ಎಫ್‌ಐಆರ್‌ ಕೇಸ್‌: ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ ಸರ್ಕಾರ ವಿರುದ್ದ ಆಕ್ರೋಶ

01:17 PM Sep 19, 2024 IST | BC Suddi
Advertisement

ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಕೇಸ್​ಗೆ ಸಂಬಂಧಿಸಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ವಿಚಾರ ಕುರಿತು ಆರ್ ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Advertisement

ತನಿಖೆ ಮಾಡಿ ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಕೇಸ್ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.ಹಾಗಾದರೆ ವಿಪಕ್ಷವಾಗಿ ಬಾಯಿ ಮುಚ್ಕೊಂಡು ಕುಳಿತುಕೊಳ್ಳಬೇಕಾ? ನಾನು ಹೋಗಿದ್ದಾಗ ಜನರು ಹೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಎಂದು ಕೂಗಿಲ್ಲ ಎಂದರು. ಹಾಗಾದರೆ ನಿಮ್ಮ ಮೇಲೆ ಯಾಕೆ ಎಫ್‌ಐಆರ್‌ ಹಾಕಬಾರದು? ವಿಪಕ್ಷ ನಾಯಕನಾಗಿ ತನಿಖೆ ಮಾಡಿ ಅಂತಾನೂ ಹೇಳಬಾರದ? ಬಾಯಿ ಮುಚ್ಚಿಸುವ ಕೆಲಸ ಸರ್ಕಾರ ಮಾಡುತ್ತಿದೆ. ವಿಪಕ್ಷ ಬಾಯಿ ಮುಚ್ಚಿಸಬೇಕು ಅಂತಾ ಇವರು ತೀರ್ಮಾನಿಸಿದ್ದಾರೆ ಎಂದರು.

ಕರ್ನಾಟಕದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಈ ಬಗ್ಗೆ ಹೋರಾಟ ಮಾಡಲು ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆಯಾಗಿದೆ. ರಾಜ್ಯಪಾಲರ ಮೇಲೂ ಕಾಂಗ್ರೆಸ್ಸಿಗರು ಗದಾಪ್ರಹಾರ ಮಾಡುತ್ತಿದ್ದಾರೆ. ವಿವಿಗಳಲ್ಲಿ ರಾಜ್ಯಪಾಲರ ಅಧಿಕಾರ ಕಸಿಯುವ ಪ್ರಯತ್ನ ಮಾಡ್ತಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು. ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article