For the best experience, open
https://m.bcsuddi.com
on your mobile browser.
Advertisement

ಆ್ಯಂಬುಲೆನ್ಸ್‌ ಚಾಲಕನ ಎಡವಟ್ಟು ಸರಣಿ ಅಪಘಾತ

02:05 PM Apr 27, 2024 IST | Bcsuddi
ಆ್ಯಂಬುಲೆನ್ಸ್‌ ಚಾಲಕನ ಎಡವಟ್ಟು ಸರಣಿ ಅಪಘಾತ
Advertisement

ಬೆಂಗಳೂರು : ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ‌ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.

ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿಸಿದ್ದಾನೆ. ಈ ವೇಳೆ ಗಾಬರಿಯಲ್ಲಿ ಬ್ರೇಕ್ ಬದಲು ಎಕ್ಸಲರೇಟರ್ ತುಳಿದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದ ವೇಳೆ ಕಾರಿನಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದು, ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಚಾಲಕ ಸುಮಂತ್ ನನ್ನ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Author Image

Advertisement