For the best experience, open
https://m.bcsuddi.com
on your mobile browser.
Advertisement

ಇಂಡಿಗೊ ವಿಮಾನಯಾನ ಸಂಸ್ಥೆಗೆ 1.2 ಕೋಟಿ ರೂ ದಂಡ!

10:08 AM Jan 18, 2024 IST | Bcsuddi
ಇಂಡಿಗೊ ವಿಮಾನಯಾನ ಸಂಸ್ಥೆಗೆ 1 2 ಕೋಟಿ ರೂ ದಂಡ
Advertisement

ನವದೆಹಲಿ: ಮುಂಬೈ ಏರ್‌ಪೋರ್ಟ್‌ನ ರನ್‌ವೇನಲ್ಲೇ ಪ್ರಯಾಣಿಕರು ಕುಳಿತು ಆಹಾರ ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ 1.2 ಕೋಟಿ ರೂ. ದಂಡ ವಿಧಿಸಲಾಗಿದೆ.

ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್‌ವೇನಲ್ಲೇ ಕುಳಿತು ಊಟ ಸೇವಿಸಿದ್ದರು. ಆ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ವಿಮಾನ ಸಂಸ್ಥೆಗೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ದಂಡ ವಿಧಿಸಿದೆ.

ದೇಶದ ವಿಮಾನಯಾನ ನಿಯಂತ್ರಕ, ಡಿಜಿಸಿಎ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ವೀಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಲೋಪಕ್ಕಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ 30 ಲಕ್ಷ ರೂ. ದಂಡ ವಿಧಿಸಿದೆ.

Advertisement

ಗೋವಾ-ದೆಹಲಿ ಮಾರ್ಗದ ಇಂಡಿಗೋ ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್‌ವೇನಲ್ಲೇ ಕುಳಿತು ಊಟ ಸೇವಿಸಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಹಾಗೂ ಮುಂಬೈ ವಿಮಾನ ನಿಲ್ದಾಣಕ್ಕೆ ಕಾರಣ ಕೇಳಿ ನೋಟಿಸ್‌ ನೀಡಲಾಯಿತು. ಇದೇ ವೇಳೆ ಮುಂಬೈ ವಿಮಾನ ನಿಲ್ದಾಣಕ್ಕೆ ಡಿಜಿಸಿಎ 30 ಲಕ್ಷ ರೂ. ದಂಡ ವಿಧಿಸಿತ್ತು.

Author Image

Advertisement