ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.! ಹವಾಮಾನ ಇಲಾಖೆ.!

07:43 AM Mar 19, 2024 IST | Bcsuddi
Advertisement

 

Advertisement

ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 24ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ,ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.

ಇನ್ನು ಉತ್ತರ ಕರ್ನಾಟಕ ಭಾಗದ ಬೀದ‌ರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags :
ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.! ಹವಾಮಾನ ಇಲಾಖೆ.!
Advertisement
Next Article