For the best experience, open
https://m.bcsuddi.com
on your mobile browser.
Advertisement

ಇಂದಿನಿಂದ ಕರಾವಳಿ ಸಹಿತ 15 ಜಿಲ್ಲೆಗಳಲ್ಲಿ ಮಳೆ ಜೋರು, ಆರೆಂಜ್ ಅಲರ್ಟ್

09:57 AM Jul 12, 2024 IST | Bcsuddi
ಇಂದಿನಿಂದ ಕರಾವಳಿ ಸಹಿತ 15 ಜಿಲ್ಲೆಗಳಲ್ಲಿ ಮಳೆ ಜೋರು  ಆರೆಂಜ್ ಅಲರ್ಟ್
Advertisement

ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಇದ್ದರೆ, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisement
Author Image

Advertisement