ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!

07:37 AM Sep 09, 2024 IST | BC Suddi
Advertisement

 

Advertisement

ಬೆಂಗಳೂರು: ಇಂದಿನಿಂದ ಮೂರು ದಿನ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ. ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನ ವ್ಯಾಪಕ ಮಳೆ ಆಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 9, 10ರಂದು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆಯಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
ಇಂದಿನಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!
Advertisement
Next Article