ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ.!

07:51 AM Jun 23, 2024 IST | Bcsuddi
Advertisement

ಬೆಂಗಳೂರು: : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು  ಜಿಲ್ಲೆಗಳಿಗೆ ರೆಡ್‌, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Advertisement

ಇಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದಿನಿಂದ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು, ಮಂಡ್ಯ, ಹಾಸನ, ಹಾವೇರಿ, ಗದಗ, ಧಾರವಾಡ, ಬೀದರ್‌, ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಪ್ರದೇಶಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags :
ಬೆಂಗಳೂರು: : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದುಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.ಹಲವು  ಜಿಲ್ಲೆಗಳಿಗೆ ರೆಡ್‌
Advertisement
Next Article