ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ,! ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಸಜ್ಜು.!

07:44 AM Jul 15, 2024 IST | Bcsuddi
Advertisement

 

Advertisement

ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದಲ್ಲಿ ಹಗರಣಗಳ ಅಸ್ತ್ರವನ್ನೇ ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಸಜ್ಜಾಗಿವೆ.  

ಒಟ್ಟು ಒಂಬತ್ತು ದಿನ ವಿಧಾನ ಮಂಡಲದ ಕಲಾಪ ನಡೆಯಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ, ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ಪಿ) ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದು, ವರ್ಗಾವಣೆ ದಂಧೆಯ ಆರೋಪ, ಡೆಂಗಿ ನಿರ್ವಹಣೆಯಲ್ಲಿ ವೈಫಲ್ಯ, ರೈತರ ಆತ್ಮಹತ್ಯೆ, ರಾಜ್ಯ ಸರ್ಕಾರದ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಹಲವು  ವಿಷಯಗಳ ಕುರಿತು ಚರ್ಚೆಗೆ ಪಟ್ಟು ಹಿಡಿಯಲು ವಿರೋಧ ಪಕ್ಷಗಳು ತಯಾರಿ ಮಾಡಿಕೊಂಡಿವೆ.!

Tags :
! ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಸಜ್ಜು.!ಇಂದಿನಿಂದ ವಿಧಾನಮಂಡಲದ ಮುಂಗಾರು ಅಧಿವೇಶನ
Advertisement
Next Article