ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿರಾ ಕ್ಯಾಂಟೀನ್‌ಗಳು ಮುಚ್ಚಲಾಗಿರುವ ಬಗ್ಗೆ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ವಿಜಯೇಂದ್ರ

04:28 PM Jul 19, 2024 IST | Bcsuddi
Advertisement

ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಪಕ್ಷದವರು ಈಗೇನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲಾಗಿದೆ ಎಂಬ ವರದಿಯ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂದಿನ ಸರ್ಕಾರದಲ್ಲಿ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಗಳನ್ನು ತೆರೆದಿರುವ ಬಗ್ಗೆ ಹೆಮ್ಮೆಪಟ್ಟು ಕೊಂಡಿದ್ದ ಕಾಂಗ್ರೆಸ್ಸಿಗರೇ, ಕಳೆದ ಬಾರಿಯ ನಮ್ಮ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಕ್ಯಾಂಟೀನ್ ಗಳನ್ನು ನಾವು ಮುಚ್ಚಿಸಲು ಹೊರಟಿದ್ದೇವೆ ಎಂದು ಅಪಪ್ರಚಾರ ನಡೆಸಿದಿರಿ. ಆದರೆ ಈಗೇನಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಬಡವರು ಹಾಗೂ ಶ್ರಮಿಕ ವರ್ಗದವರಿಗೆ ಹಸಿವು ನೀಗಿಸುತ್ತಿದ್ದ ನಿಮ್ಮದೇ ಯೋಜನೆಯ ಇಂದಿರಾ ಕ್ಯಾಂಟೀನ್ ಮುಚ್ಚಿಸುತ್ತಿದ್ದೀರಿ. ಬಡವರ ಬಗ್ಗೆ, ಹಸಿದವರ ಬಗ್ಗೆ, ನಿಮಗೆ ಪ್ರಾಮಾಣಿಕ ಕಾಳಜಿ ಇದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಮಾತ್ರ ಕೇಂದ್ರೀಕರಿಸಿರುವ ನೀವು ಅದನ್ನೂ ಪರಿಪೂರ್ಣವಾಗಿ ನಿಭಾಯಿಸಲಾಗದೆ, ಆರ್ಥಿಕ ಸಮತೋಲನ ಕಾಯ್ದುಕೊಳ್ಳಲಾಗದೆ, ರಾಜ್ಯದ ಬೊಕ್ಕಸ ಬರಿದು ಮಾಡಿ ಹಿಂದುಳಿದವರು, ದಲಿತರ ಕಲ್ಯಾಣ ಕಾರ್ಯಗಳನ್ನು ಮೂಲೆಗೊತ್ತಿ ಇದೀಗ ಬೀದಿಬದಿ ವ್ಯಾಪಾರ ಮಾಡಿ ಜೀವನ ಸಾಗಿಸುವ ಶ್ರಮಿಕ ವರ್ಗ ಹಾಗೂ ಬಡವರಿಗೆ ಹಸಿವು ನೀಗಿಸುವ ತಾಣವಾಗಿದೆ ಎಂದು ಹೇಳಿಕೊಳ್ಳುತ್ತಿದ್ದ ನಿಮ್ಮ ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದ್ದಾರೆ.

ನಿಮ್ಮ ಸರ್ಕಾರದ ಕಾರ್ಯವೈಖರಿ ನೋಡಿದರೆ ಕರ್ನಾಟಕದ ಚಲನಶೀಲತೆಗೆ ತುಕ್ಕು ಹಿಡಿಸಲು ಹೊರಟಂತಿದೆ. ಇಂದಿರಾ ಕ್ಯಾಂಟೀನ್ ಗೆ ಆಗುತ್ತಿರುವ ಗತಿಯೇ ಬಡವರ ಇತರ ಯೋಜನೆಗಳಿಗೂ ಆಗುವುದು ನಿಶ್ಚಿತ ಎಂಬುದು ಸರ್ಕಾರದ ಆರ್ಥಿಕ ಸ್ಥಿತಿಗತಿಯನ್ನು ಗಮನಿಸಿದರೆ ವೇದ್ಯವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

 

Advertisement
Next Article