For the best experience, open
https://m.bcsuddi.com
on your mobile browser.
Advertisement

ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ.

07:36 AM May 20, 2024 IST | Bcsuddi
ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ
Advertisement

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಸೋಮವಾರ ಎಲೆಲ್ಲಿ ಮಳೆಯಾಗಲಿದೆ, ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ ಮಾಡಲಾಗಿದೆ?

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಕರಾವಳಿ ಭಾಗಕ್ಕೂ ಆರೆಂಜ್ ಅಲರ್ಟ್ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ದಕ್ಷಿಣ, ಉಡುಪಿ, ಮಂಗಳೂರು ಭಾಗಕ್ಕೆ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಅಂತ ಹವಮಾನ ಇಲಾಖೆ ಹೇಳಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement

Tags :
Author Image

Advertisement