ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಐದನೇ ಹಂತದ ಮತದಾನ, ಎಲ್ಲೆಲ್ಲಿ..?

09:00 AM May 20, 2024 IST | Bcsuddi
Advertisement

ಭಾರತದಲ್ಲಿ ಸೋಮವಾರ ಐದನೇ ಹಂತದ ಮತದಾನ ನಡೆಯಲಿದೆ. ಒಟ್ಟು 49 ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಮತದಾನದಲ್ಲಿ ಒಟ್ಟು 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದೆ.

Advertisement

ಒಟ್ಟು ಏಳು ಹಂತದಲ್ಲಿ ಲೋಕಸಭಾ ಚುನಾವಣೆಗಳು ನಡೆಯಲಿದ್ದು, ಈಗಾಗಲೇ ನಾಲ್ಕು ಹಂತದ ಮತದಾನ ಮುಕ್ತಾಯವಾಗಿದೆ. ಸೋಮವಾರ ಐದನೇ ಹಂತದ ಮತದಾನ ನಡೆಯಲಿದ್ದು, ಮೇ 25 ರಂದು ಆರನೇ ಹಂತದ ಮತದಾನ ಹಾಗೂ ಜೂನ್‌ 1ರಂದು ಏಳನೇ ಹಂತದ ಮತದಾನ ನಡೆಯಲಿದೆ. ಮತ ಏಣಿಕೆ ಕಾರ್ಯ ಜೂನ್‌ 4 ರಂದು ನಡೆಯಲಿದೆ.

ಐದನೇ ಹಂತದ ಮತದಾನದಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ ಏಳು, ಬೀಹಾರದ ಐದು, ಓಡಿಶಾದ ಐದು, ಜಾರ್ಖಂಡ್‌ದ ಮೂರು, ಜಮ್ಮು ಮತ್ತು ಕಾಶ್ಮೀರ್‌ ಹಾಗೂ ಲಡಾಕ್‌ ತಲಾ ಒಂದು ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಐದನೇ ಹಂತದ ಮತದಾನದ ದೇಶದಲ್ಲಿ ನಡೆದಿದ್ದು, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಎಲ್ಲ ರಾಜಕೀಯ ಪಕ್ಷಗಳು ಜನರ ಕಲ್ಯಾಣದ ಬಗ್ಗೆ ಒತ್ತು ನೀಡಬೇಕು ಎಂದು ವಿನಂತಿಸಿದ್ದಾರೆ.

Advertisement
Next Article