ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ರೆಡ್‌ ಅಲರ್ಟ್‌ ಘೋಷಣೆ.!

07:03 AM Jun 09, 2024 IST | Bcsuddi
Advertisement

 

Advertisement

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ.

ನಾಳೆ ಧಾರವಾಡ, ಹಾವೇರಿ ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಇಂದು ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯನಗರ, ಚಿಕ್ಕಬಳ್ಳಾಪುರ, ಯಾಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ.

Tags :
ಮಳೆ
Advertisement
Next Article