ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ : 4 ದಿನಗಳ ಆಸ್ಟ್ರಿಯಾ ಪ್ರವಾಸ

10:10 AM Jul 08, 2024 IST | Bcsuddi
Advertisement

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದ ನಡುವೆ, ಪ್ರಧಾನಿ ಮೋದಿ ತಮ್ಮ ಸ್ನೇಹಿತ ಪುಟಿನ್ ಅವರನ್ನು ಭೇಟಿ ಮಾಡಲು ಮಾಸ್ಕೋಗೆ ತೆರಳುತ್ತಿದ್ದಾರೆ. ಸುಮಾರು 5 ವರ್ಷಗಳ ನಂತರ ಮೋದಿ ಇಂದು ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದು, ಪ್ರಧಾನಿ ಮೋದಿ ಅವರು 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಇಂದಿನಿಂದ ನಾಲ್ಕು ದಿನಗಳ ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.

Advertisement

ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಆಸ್ಟ್ರಿಯಾಕ್ಕೆ ತೆರಳಲಿರುವ ಪ್ರಧಾನಿ, ಗುರುವಾರದವರೆಗೂ ಅಲ್ಲಿರಲಿದ್ದಾರೆ. 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು. ಉಭಯ ದೇಶಗಳ ಬಾಂಧವ್ಯದ ಕುರಿತು ವಿಸ್ತೃತ ಸಮಾಲೋಚನೆ ನಡೆಸಲಿರುವ ಅವರು, ಸಮಕಾಲೀನ ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಕುರಿತು ಅತ್ಯುನ್ನತ ಮಟ್ಟದ ಚರ್ಚೆಯನ್ನು ನಡೆಸಲಿದ್ದಾರೆ. ಮೋದಿ ಅವರ ಭೇಟಿ ಅತ್ಯಂತ ಮಹತ್ವದ್ದು, ಸುಸಜ್ಜಿತವಾಗಿರಲಿದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್‌ ವಕ್ತಾರ ಡಿಮಿಟ್ರಿ ಪೆಸ್ಕೋವ್‌ ತಿಳಿಸಿದ್ದಾರೆ.

Advertisement
Next Article