For the best experience, open
https://m.bcsuddi.com
on your mobile browser.
Advertisement

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ, ಒಂದೇ ದಿನ ನಾಲ್ಕು ಕಡೆ ಭಾಷಣ

09:20 AM Apr 28, 2024 IST | Bcsuddi
ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ  ಒಂದೇ ದಿನ ನಾಲ್ಕು ಕಡೆ ಭಾಷಣ
Advertisement

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಮತದಾನಕ್ಕೆ ಸಿದ್ಧವಾಗುತ್ತಿದೆ. ಇದೇ ವೇಳೆ ಬಿಜೆಪಿ ಮತ್ತೆ ತನ್ನ ರಾಷ್ಟ್ರೀಯ ನಾಯಕರಿಂದ ಭರದಿಂದ ಚುನಾವಣಾ ಪ್ರಚಾರ ಶುರು ಮಾಡಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, ಒಂದೇ ದಿನ ನಾಲ್ಕು ಕಡೆ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಲಿದ್ದು, ಏಪ್ರಿಲ್ 28 ರ ಭಾನುವಾರ ಮತ್ತು ಸೋಮವಾರದ ಎರಡು ದಿನಗಳಲ್ಲಿ ಐದು ಬ್ಯಾಕ್ ಟು ಬ್ಯಾಕ್ ಸಾರ್ವಜನಿಕ ಸಭೆಗಳನ್ನು ನಡೆಸಿ ಮತಯಾಚಿಸಲಿದ್ದಾರೆ. ರಾಜ್ಯದಲ್ಲಿ ತನ್ನ ಸ್ಥಾನಗಳನ್ನು ಬಿಟ್ಟುಕೊಡಬಾರದೆಂಬ ಹಠದಲ್ಲಿರುವ ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.

ಬಿಜೆಪಿಯ ರಾಜ್ಯ ಘಟಕ ಹಂಚಿಕೊಂಡ ಮಾಹಿತಿ ಪ್ರಕಾರ ಪ್ರಧಾನಿ ಮೋದಿ ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಉತ್ತರ ಕರ್ನಾಟಕ ಪ್ರದೇಶದಲ್ಲಿ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 29, ಸೋಮವಾರದಂದು ಪ್ರಧಾನಿ ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ರಾತ್ರಿ ಕುಂದಾನಗರಿ ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮೋದಿಯವರನ್ನು ಶೆಟ್ಟರ್ ಮತ್ತಿತರ ಗಣ್ಯರು ಸ್ವಾಗತಿಸಿದ್ದಾರೆ.

Advertisement

 

ವೇಳಾಪಟ್ಟಿ: 1. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕರ್ನಾಟಕ ರಾಜ್ಯ ಸಂಯೋಜಕ ವಿ ಸುನೀಲ್ ಕುಮಾರ್ ಅವರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುತ್ತಾರೆ ಮತ್ತು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

2. ನಂತರ ಪ್ರಧಾನಿ ಮೋದಿ ಅವರು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಲಿದ್ದಾರೆ.

Author Image

Advertisement