For the best experience, open
https://m.bcsuddi.com
on your mobile browser.
Advertisement

ಇಂದು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ  ಬಿಎಸ್ ಯಡಿಯೂರಪ್ಪವಿರುದ್ಧ  ಹೈ ಕೋರ್ಟನಲ್ಲಿ ವಿಚಾರಣೆ.!

07:30 AM Aug 30, 2024 IST | BC Suddi
ಇಂದು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ  ಬಿಎಸ್ ಯಡಿಯೂರಪ್ಪವಿರುದ್ಧ  ಹೈ ಕೋರ್ಟನಲ್ಲಿ ವಿಚಾರಣೆ
Advertisement

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ ನ್ಯಾಯಮೂರ್ತಿ ಎಂ. ನಾಗ ಪ್ರಸನ್ನ ನೇತೃತ್ವದ ಪೀಠವು ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತ್ತು.

Advertisement

ಯಡಿಯೂರಪ್ಪ ಅವರನ್ನು ಬಂಧಿಸದಂತೆ ಪೀಠವು ಆದೇಶ ಹೊರಡಿಸಿದ್ದು, ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿಯನ್ನು ವಿಸ್ತರಿಸಿದೆ. ಇದೇ ವೇಳೆ ಸಂತ್ರಸ್ತೆಯ ಪರ ವಕೀಲರು ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
Author Image

Advertisement