ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಹಲವು ರಾಜ್ಯದಲ್ಲಿ ಭಾರೀ ಮಳೆ .! ಕರ್ನಾಟಕದ ಈ ಜಿಲ್ಲೆಗಳೂ ಸೇರಿವೆ. !

07:42 AM Oct 16, 2024 IST | BC Suddi
Advertisement

ಬೆಂಗಳೂರು : ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಅಕ್ಟೋಬರ್ 16 ರ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

 

Tags :
ಇಂದು ಹಲವು ರಾಜ್ಯದಲ್ಲಿ ಭಾರೀ ಮಳೆ .! ಕರ್ನಾಟಕದ ಈ ಜಿಲ್ಲೆಗಳೂ ಸೇರಿವೆ. !
Advertisement
Next Article