ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂಧನ ಸ್ವಾವಲಂಬನೆ ಸಾಧಿಸುವುದೇ ನಮ್ಮ ಸಂಕಲ್ಪ : ಪ್ರಹ್ಲಾದ್ ಜೋಶಿ

06:19 PM Jun 12, 2024 IST | Bcsuddi
Advertisement

ಹೊಸದಿಲ್ಲಿ : ಕೇಂದ್ರ ಸಚಿವರಾಗಿ ಎರಡನೇ ಇನ್ನಿಂಗ್ಸ್ ನಲ್ಲಿ ಹೊಸ ಖಾತೆಗಳ ಜವಾಬ್ದಾರಿ ಹೊತ್ತಿರುವ ಸಚಿವ ಪ್ರಹ್ಲಾದ್‌ ಜೋಶಿ ಅವರು ತಮ್ಮ ಕಚೇರಿಯಲ್ಲಿ ಕುಟುಂಬ ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಲಕ್ಷ್ಮಿ ಪೂಜೆ ನೆರವೇರಿಸುವ ಮೂಲಕ ಕಾರ್ಯಾರಂಭ ಮಾಡಿದರು. ಹೌದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿ ಅವರು ಜೂನ್ 11ಅಧಿಕಾರ ವಹಿಸಿಕೊಂಡರು. ಬಳಿಕ ಆಯಾ ಖಾತೆಗಳ ಹಿಂದಿನ ಸಚಿವರುಗಳಿಂದ ಅಧಿಕಾರ ಸ್ವೀಕರಿಸಿದರು. ಮೊದಲು ಶ್ರೀಪಾದ ನಾಯಕ್ ಅವರಿಂದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಅಧಿಕಾರ ವಹಿಸಿಕೊಂಡರು. " 2047ರ ವೇಳೆಗೆ ಭಾರತ ಇಂಧನ ಸ್ವಾವಲಂಬನೆ ಸಾಧಿಸುವುದೇ ನಮ್ಮ ಸಂಕಲ್ಪವಾಗಿದೆ. ಹೊಸ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ದೃಷ್ಟಿಯೊಂದಿಗೆ ಹೊಸ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡು ಮುಂದುವರಿಯುತ್ತೇವೆ " ಎಂದು ಹೇಳಿದರು. ಇನ್ನು, ಪಿಯೂಷ್ ಗೋಯಲ್ ಅವರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆಯ ಅಧಿಕಾರವನ್ನು ಜೋಶಿ ವಹಿಸಿಕೊಂಡರು. ನೂತನ ಖಾತೆಗಳ ಅಧಿಕಾರ ವಹಿಸಿಕೊಂಡ ಬಳಿಕ ಸಚಿವ ಪ್ರಹ್ಲಾದ್‌ ಜೋಶಿ ಆಯಾಯ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಪ್ರಪ್ರಥಮವಾಗಿ ಔಪಚಾರಿಕ ಸಭೆ ನಡೆಸಿದರು.

Advertisement

Advertisement
Next Article