For the best experience, open
https://m.bcsuddi.com
on your mobile browser.
Advertisement

ಇನ್ನು ಮುಂದೆ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 2 ಗಂಟೆ 45 ಮಾತ್ರ

04:58 PM Sep 13, 2024 IST | BC Suddi
ಇನ್ನು ಮುಂದೆ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 2 ಗಂಟೆ 45 ಮಾತ್ರ
Advertisement
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ ಈ ವರ್ಷದ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಸಮಯ ಕಡಿತ ಮಾಡಿರೋ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ.

ಈ ಮೊದಲು ವಿದ್ಯಾರ್ಥಿಗಳು ಉತ್ತರ ಬರೆಯಲು 3 ಗಂಟೆ 15 ನಿಮಿಷ ಸಮಯ ಕೊಡಲಾಗ್ತಿತ್ತು. 3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ.

ಸಮಯ ಕಡಿತಕ್ಕೆ ಬೋರ್ಡ್ ಕಾರಣ ನೀಡಿದೆ. ಮೊದಲು 3 ಗಂಟೆ 15 ನಿಮಿಷ ಇದ್ದ ಸಮಯದಲ್ಲಿ 100 ಅಂಕಗಳಿಗೆ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತಿತ್ತು. ಆದರೆ ಈಗ 70/80 ಅಂಕಗಳಿಗೆ ಲಿಖಿತ ಪರೀಕ್ಷೆ ಇದ್ದು, ಉಳಿದ ಅಂಕಗಳು ಇಂಟರ್‌ನಲ್ ಅಸೆಸ್ಮೆಂಟ್ ಗೆ ನೀಡಲಾಗ್ತಿದೆ. ಈ ಹಿನ್ನಲೆಯಲ್ಲಿ 15 ನಿಮಿಷ ಉತ್ತರ ಬರೆಯಲು ಕಡಿತ ಮಾಡಲಾಗಿದೆ ಅನ್ನೋದು ಇಲಾಖೆ ವಾದವಾಗಿದೆ. ಅಂಕಗಳು ಕಡಿಮೆ ಮಾಡಿದರು 15 ನಿಮಿಷ ಹೆಚ್ಚುವರಿ ಸಮಯ ಕೊಟ್ಟಿದ್ರೆ ಏನ್ ಸಮಸ್ಯೆ ಆಗುತ್ತೆ ಅನ್ನೋದು ಪೋಷಕರು, ಶಿಕ್ಷಣ ತಜ್ಞರ ಪ್ರಶ್ನೆಯಾಗಿದೆ.

Advertisement
Author Image

Advertisement