For the best experience, open
https://m.bcsuddi.com
on your mobile browser.
Advertisement

ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಾಯಿ

04:31 PM Mar 19, 2024 IST | Bcsuddi
ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಾಯಿ
Advertisement

ಚಿತ್ರದುರ್ಗ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಅಗ್ನಿ ಪ್ರವೇಶ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ  ನಡೆದಿದೆ.

ಮಾರಕ್ಕ ಎಂಬ 24 ವರ್ಷದ ಮಹಿಳೆಯೇ ತನ್ನ ಇಬ್ಬರು ಮಕ್ಕಳಾದ ನಯನ (4) ಮತ್ತು ಹರ್ಷ ವರ್ಧನ್ (2)ಗೆ ಪೆಟ್ರೋಲ್‌ ಹಾಕಿ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಮಕ್ಕಳು ಗ್ರಾಮದ ಹೊರವಲಯಕ್ಕೆ ಹೋಗಿ ಅಲ್ಲಿ ಈ ಅತಿರೇಕದ ಕೃತ್ಯ ನಡೆಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ.

Advertisement

Author Image

Advertisement