ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇರಾನ್ ನ ಮಾದಕವಸ್ತುಗಳ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಅವಘಡ: 27 ಜನರು ಮೃತ್ಯು

09:19 AM Nov 04, 2023 IST | Bcsuddi
Advertisement

ಇರಾನ್: ಉತ್ತರ ಇರಾನ್‌ನಲ್ಲಿರುವ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

Advertisement

ರಾಜಧಾನಿ ಟೆಹ್ರಾನ್‌ನ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್‌ರೌಡ್ ನಗರದಲ್ಲಿಈ ಅವಘಡ ಸಂಭವಿಸಿದ್ದು, ಕನಿಷ್ಠ ಹದಿನೇಳು ಮಂದಿ ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬಾರೀ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ.ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವು ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.

ಈ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತಾಗಿ ತನಿಖೆ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Next Article