For the best experience, open
https://m.bcsuddi.com
on your mobile browser.
Advertisement

ಇಹಲೋಕ ತ್ಯಜಿಸಿದ ನಟ ಕೆ ಶಿವರಾಮ್ - ಹೃದಯಾಘಾತದಿಂದ ಮೃತಪಟ್ಟ ಮಾಜಿ ಐಎಎಸ್ ಅಧಿಕಾರಿ

01:03 PM Feb 29, 2024 IST | Bcsuddi
ಇಹಲೋಕ ತ್ಯಜಿಸಿದ ನಟ ಕೆ ಶಿವರಾಮ್   ಹೃದಯಾಘಾತದಿಂದ ಮೃತಪಟ್ಟ ಮಾಜಿ ಐಎಎಸ್ ಅಧಿಕಾರಿ
Advertisement

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ , ನಟ ಕೆ. ಶಿವರಾಮ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮ್, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದರು. 1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮ್, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು. 2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

Author Image

Advertisement