ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇ.ಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಹೇಮಂತ್ ಸೊರೇನ್

05:07 PM May 06, 2024 IST | Bcsuddi
Advertisement

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿತ್ತು. ಇದೀಗ ಕೋರ್ಟ್ ನ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Advertisement

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಸೊರೆನ್ ಪರ ವಕೀಲರು ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಮೇ 13ರಿಂದ ಜಾರ್ಖಂಡ್‌ನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಸೊರೆನ್ ಅವರಿಗೆ ತಮ್ಮ ಪಕ್ಷ ಜೆಎಂಎಂ ಪರ ಪ್ರಚಾರ ಮಾಡಲು ಅನುಮತಿ ನೀಡಬೇಕು ಎಂದು ಕೋರಿದ್ದಾರೆ

Advertisement
Next Article