ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈರುಳ್ಳಿ ಬೆಲೆ ದಿಢೀರ್‌ ಹೆಚ್ಚಳ

11:40 AM Aug 30, 2024 IST | BC Suddi
Advertisement

ಬೆಂಗಳೂರು :ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಿಸಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌

Advertisement

ಈ ಮೊದಲು ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

ಅತಿವೃಷ್ಟಿಯಿಂದ ಈರುಳ್ಳಿ ಮಾತ್ರವಲ್ಲದೆ ಬೆಳ್ಳುಳ್ಳಿ ದರ ಕೂಡ ಕೆಜಿಗೆ 400 ರೂ.ಗೆ ಏರಿಕೆಯಾಗಿದೆ. ಕಳೆದ ಡಿಸೆಂಬರ್, ಜನವರಿ ವೇಳೆಗೆ ಬೆಳ್ಳುಳ್ಳಿ ಕೆಜಿಗೆ ದಾಖಲೆಯ 500ವರೆಗೆ ಏರಿಕೆಯಾಗಿ ಬಳಿಕ 280, 250 ರೂ.ವರೆಗೆ ಇಳಿಕೆಯಾಗಿತ್ತು.ಕರ್ನಾಟಕಕ್ಕೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದಲೇ ಬೆಳ್ಳುಳ್ಳಿ ಪೂರೈಕೆಯಾಗುತ್ತಿದೆ. ಆ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಬೆಳ್ಳುಳ್ಳಿ ಉತ್ಪಾದನೆ ಕುಸಿತವಾಗಿರುವುದೇ ದರ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article