ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈ ಕಾರಣಕ್ಕೆ ಹೈದರಬಾದ್ ಮೂಲದ ಎಂಬಿಎ ಪದವಿಧರ ಪೊಲೀಸರ ಅತಿಥಿ.!

08:00 AM Feb 01, 2024 IST | Bcsuddi
Advertisement

 

Advertisement

ಬೆಂಗಳೂರು: ನಗರದ ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಎಂಬಿಎ ಪದವೀಧರ ಸೇರಿದಂತೆ ಮೂವರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ನ ಮೊಹಮ್ಮದ್ ಅವೇಜ್ (42), ಶೇಕ್ ಅಬು ತಾಲಿಬ್ (22) ಮತ್ತು ಅಬ್ದುಲ್ ರಿಯಾಜ್ (22) ಬಂಧಿತರು. ಇವರಿಂದ 50 ಗ್ರಾಂ ಚಿನ್ನಾಭರಣ, 157 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಕಾರು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಎಂಬಿಎ ಪದವೀಧರನಾದ ಅವೇಜ್, ಇತರೆ ಆರೋಪಿಗಳ ಜೊತೆ ಸೇರಿ ಕಳ್ಳತನಕ್ಕೆ ತಂಡ ಕಟ್ಟಿದ್ದ. ಎಲ್ಲ ಆರೋಪಿಗಳು, ಹೈದರಾಬಾದ್ನಿಂದ ಕಾರಿನಲ್ಲಿ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ವಸತಿ ಪ್ರದೇಶದ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿ, ಸುತ್ತಾಡುತ್ತಿದ್ದರು. ಬೀಗ ಹಾಕಿರುತ್ತಿದ್ದ, ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ ಹಾಗೂ ರಂಗೊಲಿ ಹಾಕಿರದ ಮನೆಗಳನ್ನು ಗುರುತಿಸುತ್ತಿದ್ದರಂತೆ.!

ಅವರು ಮಾಡುವ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ  ಸೆರೆಯಾಗಿತ್ತು. ಅದನ್ನು ಆಧರಿಸಿ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.!

Tags :
ಈ ಕಾರಣಕ್ಕೆ ಹೈದರಬಾದ್ ಮೂಲದ ಎಂಬಿಎ ಪದವಿಧರ ಪೊಲೀಸರ ಅತಿಥಿ.!
Advertisement
Next Article