ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈ ಪಟ್ಟಿಯಲ್ಲಿರುವವರಿಗೆ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ

10:43 AM Feb 22, 2024 IST | Bcsuddi
Advertisement

ರಾಜ್ಯ ಸರಕಾರದಿಂದ ಪಡಿತರ ಚೀಟಿಯ ಯಜಮಾನಿಗೆ ಮಾಸಿಕವಾಗಿ ಪ್ರತಿ ತಿಂಗಳು ನೀಡುವ ರೂ 2,000 ಅರ್ಥಿಕ ನೆರವಿನ ಫೆಬ್ರವರಿ-2024(Gruhalakshmi february amount) ತಿಂಗಳ ಕಂತನ್ನು ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗಿದೆ.

Advertisement

ಆಹಾರ ಇಲಾಖೆಯ  ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಿರುವ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿರುವ ಅರ್ಜಿದಾರರ ಕುಟುಂಬದ ಯಜಮಾನಿಯ ಖಾತೆಗೆ ಫೆಬ್ರವರಿ-2024 ತಿಂಗಳ ಗೃಹಲಕ್ಷ್ಮಿ ಹಣವನ್ನು ವರ್ಗಾವಣೆ ಮಾಡಲಾಗಿದ್ದು, ಇ-ಅಡಳಿತ ವಿಭಾಗದ DBT karnataka ಮೊಬೈಲ್ ಅಪ್ಲಿಕೇಶನ್ ಮೂಲಕ ನಿಮ್ಮ ಖಾತೆಗೆ ಫೆಬ್ರವರಿ-2024 ತಿಂಗಳ  ಹಣ ಬಂದಿರುವುದನ್ನು ಖಚಿತಪಡಿಸಿಕೊಳ್ಳಬಹುದು.

ಈಗಾಗಲೇ ಅರ್ಜಿ ಸಲ್ಲಿಸಿದವರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಫೆಬ್ರವರಿ-2024 ತಿಂಗಳ ಹಣ ನಿಮ್ಮ ಖಾತೆಗೆ ಬಂದಿದಿಯಾ? ಎಂದು ಸಂಪೂರ್ಣ ವಿವರವನ್ನು ತಿಳಿದುಕೊಳ್ಳಬಹುದು ಇದಲ್ಲದೇ ಆಹಾರ ಇಲಾಖೆಯ ವೆಬ್ಸೈಟ್ ಭೇಟಿ ಮಾಡಿ ಪಡಿತರ ಚೀಟಿ ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಸಹ ತಿಳಿದುಕೊಳ್ಳಬಹುದು.

ಹಳ್ಳಿವಾರು ಅರ್ಹ ಪಡಿತರ ಚೀಟಿ ಪಟ್ಟಿಯನ್ನು ನೋಡುವ ವಿಧಾನ:

ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ರೇಷನ್ ಕಾರ್ಡನ ಅರ್ಹ ಹಳ್ಳಿವಾರು ಗ್ರಾಹಕರ ಪಟ್ಟಿಯನ್ನು ತಿಳಿದುಕೊಳ್ಳಬಹುದು ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 2,000 ಅರ್ಥಿಕ ನೆರವು ಪಡೆಯಲು ಅರ್ಹರಾಗಿರುತ್ತಾರೆ. ಈ ಕೆಳಗೆ ಹಂತವಾರು ಈ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ನೋಡಬಹುದು ಎಂದು ತಿಳಿಸಲಾಗಿದೆ.

Step-1: ಮೊದಲಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ration card list ಅಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಬೇಕು. ಇದಾದ ಬಳಿಕ "ಇ-ಪಡಿತರ ಚೀಟಿ" ವಿಭಾಗದ ಮೇಲೆ ಕ್ಲಿಕ್ ಮಾಡಿ "ಹಳ್ಳಿ ಪಟ್ಟಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: "ಹಳ್ಳಿ ಪಟ್ಟಿ" ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ, ಹಳ್ಳಿ ಹೆಸರನ್ನು ಆಯ್ಕೆ ಮಾಡಿಕೊಂಡು "Go" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Udyoga mela-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಸರಕಾರದಿಂದ ಬೃಹತ್ ಉದ್ಯೋಗ ಮೇಳ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್

ಈ ರೀತಿ ವಿಧಾನವನ್ನು ಅನುಸರಿಸಿದ ನಂತರ ನಿಮ್ಮ ಹಳ್ಳಿಯಲ್ಲಿ ಪಡಿತರ ಚೀಟಿ ಹೊಂದಿರುವ ಅರ್ಹ ಗ್ರಾಹಕರ ಪಟ್ಟಿ ಬರುತ್ತದೆ ಈ ಪಟ್ಟಿಯಲ್ಲಿ ರೇಷನ್ ಕಾರ್ಡ ನಂಬರ್, ಫಲಾನುಭವಿಯ ಹೆಸರು, ವಿಳಾಸ, ಒಟ್ಟು ಪಡಿತರ ಚೀಟಿಯಲ್ಲಿರುವ ಸದಸ್ಯರ ಸಂಖ್ಯೆ ತೋರಿಸುತ್ತದೆ.

ಫೆಬ್ರವರಿ-2024 ತಿಂಗಳ ಗೃಹಲಕ್ಷ್ಮಿ ಹಣ ಜಮಾ ಅಗಿರುವುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡುವ ವಿಧಾನ:

ಸರಕಾರದ ಇ-ಅಡಳಿತ ವಿಭಾಗದಿಂದ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಅರ್ಥಿಕ ನೆರವು ನೀಡುವ ಯೋಜನೆಗಳ ನೇರ ನಗದು ವರ್ಗಾವಣೆ ಸ್ಥಿತಿಯನ್ನು(DBT status check) ಚೆಕ್ ಮಾಡಲು "DBT Karnataka" ಎನ್ನುವ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದ್ದು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಫೆಬ್ರವರಿ-2024 ತಿಂಗಳ ಗೃಹಲಕ್ಷ್ಮಿ ಹಣ ಜಮಾ ಅಗಿರುವುದನ್ನು ಫಲಾನುಭವಿಗಳು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದಾಗಿದೆ.

Step-1: ಮೊದಲಿಗೆ ಈ Download Now ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇ ಸ್ಟೋರ್ ಭೇಟಿ ಮಾಡಿ "DBT Karnataka" ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Step-2: ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಬಳಿಕ ಫಲಾನುಭವಿಯ ಅಧಾರ್ ನಂಬರ್ ಮತ್ತು ಆಧಾರ್ ನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ಹಾಕಿ ಈ ಅಪ್ಲಿಕೇಶನ್ ಅನ್ನು ಲಾಗಿನ್ ಅಗಲು 4 ಅಂಕಿಯ ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಲಾಗಿನ್ ಅದ ಬಳಿಕ "ಪಾವತಿ ಸ್ಥಿತಿ" ಬಟನ್ ಮೇಲೆ ಕ್ಲಿಕ್ ಮಾಡಿ "ಗೃಹಲಕ್ಷ್ಮಿ" ಹೆಸರಿನ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫೆಬ್ರವರಿ-2024 ತಿಂಗಳ ಗೃಹಲಕ್ಷ್ಮಿ ಹಣ ಯಾವ ದಿನ ಜಮಾ ಅಗಿದೆ? UTR ನಂಬರ್ ಇತರೆ ಸಂಪೂರ್ಣ ವಿವರ ತೋರಿಸುತ್ತದೆ.

Advertisement
Next Article